ಬ್ರಹ್ಮಾವರ: ಭಾರೀ ಗಾಳಿಮಳೆಗೆ 36 ಮನೆಗಳಿಗೆ ಹಾನಿ: ಅಪಾರ ನಷ್ಟ

ಉಡುಪಿ: ಬ್ರಹ್ಮಾವರ ತಾಲೂಕಿನ ಕರ್ಜೆ ಗ್ರಾಮದ ಕುರ್ಪಾಡಿ ಭಾಗದಲ್ಲಿ ಇಂದು ಬೆಳಗ್ಗೆ ಸುರಿದ ಭಾರೀ ಗಾಳಿ ಮಳೆಯಿಂದ ಸುಮಾರು 36 ಮನೆಗಳಿಗೆ ತೀವ್ರ ಹಾನಿಯಾಗಿದ್ದು, ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಗಾಳಿಮಳೆಗೆ ಹಲವಾರು ಮರ, ವಿದ್ಯುತ್ ಕಂಬಗಳು ಬಿದ್ದು ಸಮಸ್ಯೆ ಯಾಗಿದೆ. ಕಡೇಕಾರ್ ಗ್ರಾಮದಲ್ಲೂ ಹಲವು ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಬಗ್ಗೆ ವರದಿಯಾಗಿದೆ. ಈಗಾಗಲೇ ಕಂದಾಯ ಇಲಾಖೆ, ಮೆಸ್ಕಾಂ, ಅಗ್ನಿಶಾಮಕ ದಳದ ಅಧಿಕಾರಿಗಳು ಕಾರ್ಯಾಚರಣೆ ಮಾಡುತ್ತಿದ್ದಾರೆ.

ಮನೆ ಹಾನಿಯಾದ ಸಂತ್ರಸ್ತರಿಗೆ ಗರಿಷ್ಠ ಪರಿಹಾರ ಶೀಘ್ರ ಕಲ್ಪಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದು, ಪೂರ್ವ ನಿಗದಿ ಕಾರ್ಯಕ್ರಮದ ಹಿನ್ನಲೆ ಬೆಂಗಳೂರಿನಲ್ಲಿರುವ ಕಾರಣ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾ

Latest Indian news

Popular Stories