ಬ್ರಹ್ಮಾವರ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ : ವಾಸ್ತುತಜ್ಞನ ಬಂಧನ

ಬ್ರಹ್ಮಾವರ, ಮೇ 2: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಬ್ರಹ್ಮಾವರ ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದಾರೆ.

ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕಾ(51) ಬಂಧಿತ ಆರೋಪಿ. ಈತ ಬ್ರಹ್ಮಾವರ ಬಸ್ ನಿಲ್ದಾಣ ಸಮೀಪದ ಲಾಡ್ಜ್ ವೊಂದರ ರೂಮಿನಲ್ಲಿ ಕಳೆದ 12ವರ್ಷಗಳಿಂದ ವಾಸ್ತುತಜ್ಞ, ಜಲತಜ್ಞ, ಯೋಗ ಪಂಡಿತ, ಆಧ್ಯಾತ್ಮಿಕ ಪಂಡಿತ ಎಂಬುದಾಗಿ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದ ಎನ್ನಲಾಗಿದೆ.

18ರ ಹರೆಯದ ಯುವಕ ತನ್ನ ತಂದೆಯೊಂದಿಗೆ ಈತನ ಬಳಿ ವಾಸ್ತು ಕೇಳಲು ಲಾಡ್ಜ್‌ನಲ್ಲಿರುವ ರೂಮಿಗೆ ರಾತ್ರಿ 9ಗಂಟೆ ಸುಮಾರಿಗೆ ಹೋಗಿದ್ದನು. ಈ ಸಂದರ್ಭ ತಂದೆಯನ್ನು ಹೊರಗೆ ಕಳುಹಿಸಿದ ಅನಂತ ನಾಯ್ಕಿ, ಬಳಿಕ ಯುವಕನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂದು ದೂರಲಾಗಿದೆ. ಅದರಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅಸ್ವಾಭಾವಿಕ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ. ತನಿಖೆ ನಡೆಸಿದ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ದಿವಾಕರ ಪಿ.ಎಂ. ನೇತೃತ್ವದ ತಂಡ ಆರೋಪಿ ಅನಂತ ನಾಯ್ಕಾನನ್ನು ಇಂದು ಬೆಳಗ್ಗೆ ಬಂಧಿಸಿದೆ. ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾ ಲಯ ಆರೋಪಿಗೆ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ

Latest Indian news

Popular Stories