
Featured StoryUdupi
ಬ್ರಹ್ಮಾವರ: ಕಸ ವಿಲೇವಾರಿ ಘಟಕಕ್ಕೆ ಬೆಂಕಿ; ಭಸ್ಮ
ಬ್ರಹ್ಮಾವರ : ಇಲ್ಲಿನ ಮೀನು ಮಾರುಕಟ್ಟೆ ಸಮೀಪದಲ್ಲಿರುವ ಕಸ ವಿಲೇವಾರಿ ಮಾಡುವ ಎಸ್.ಎಲ್.ಆರ್.ಎಮ್ ಘಟಕ ಮದ್ಯರಾತ್ರಿ ಆಕಸ್ಮಿಕ ಬೆಂಕಿಯಿಂದ ಹೊತ್ತಿ ಉರಿದಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಶತಪ್ರಯತ್ನಪಟ್ಟರೂ ಎಸ್.ಎಲ್.ಆರ್.ಎಮ್ ಘಟಕ ಸಂಪೂರ್ಣ ಸುಟ್ಟು ಕರಕಲಾಗಿದೆ.
ಮಧ್ಯರಾತ್ರಿ ಹೊತ್ತಿಕೊಂಡ ಬೆಂಕಿ ಘಟಕದ ಒಳಗೆ ನಿಲ್ಲಿಸಿದ ಮೂರು ಟಾಟ ಯೇಸ್ ಗಾಡಿಗಳು, ಒಂದು ಪಿಕಪ್, ಲಕ್ಷಾಂತರ ಮೌಲ್ಯದ ವಿಂಗಡಿಸಿದ ಕಸ, ಎರಡು ಬೇಲಿಂಗ್ ಮೆಶಿನ್, ಒಂದು ಬರ್ನಿಂಗ್ ಮೆಶಿನ್, 6 ಸಿಸಿ ಕೆಮರಾಗಳು, ಕಚೇರಿ ಫೈಲ್ ಗಳು, ಪುಸ್ತಕಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಸಮೀಪದ ಗುಜರಿ ಅಂಗಡಿಗೂ ಬೆಂಕಿ ತಗುಲಿದ್ದು ಅಲ್ಲೂ ಹಾನಿಯಾಗಿದೆ.
ಉಡುಪಿ, ಕುಂದಾಪುರ, ಮಲ್ಪೆ ಮೂರು ಕಡೆಗಳ ಅಗ್ನಿಶಾಮಕ ವಾಹನಗಳನ್ನು ಬೆಂಕಿ ನಂದಿಸುವ ಕಾರ್ಯಕ್ಕೆ ಬಳಸಿಕೊಳ್ಳಲಾಯಿತು. ಬೆಂಕಿ ನಂದಿಸುವ ಕಾರ್ಯ ಬೆಳಗಿನವರೆಗೂ ಮುಂದುವರೆದಿದೆ.




