Featured StoryUdupi

ಬ್ರಹ್ಮಾವರ:ಸಾಮಾಜಿಕ ಜಾಲಾತಾಣದಲ್ಲಿ ದ್ವೇಷ ಹರಡುವ ಪೋಸ್ಟ್ ಮಾಡಿದ ಆರೋಪ – ಇಬ್ಬರ ಬಂಧನ

ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ದಿನಾಂಕ 29-01-2026 ರಂದು ದ್ವೇಷ ಭಾಷಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಅಪರಾಧ ಕ್ರಮಾಂಕ 19/2026 (ಕಲಂ 196(1), 353(2) ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆ) ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ವಾರಂಬಳ್ಳಿ ಗ್ರಾಮ ಸಂತೋಷ ಕುಮಾರ್ ಶೆಟ್ಟಿ (56), ಕೋಟೇಶ್ವರ ಗ್ರಾಮ, ಕೆ. ನಾಗರಾಜ (62), ಬಂಧಿತ ಆರೋಪಿಗಳು:
ಈ ಕಾರ್ಯಾಚರಣೆ ಮಾನ್ಯ ಪ್ರಭು ಡಿ.ಟಿ ಅವರ ಹಾಗೂ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರಾದ ಗೋಪಿಕೃಷ್ಣ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಮತ್ತು ಠಾಣಾ ಸಿಬ್ಬಂದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.

ಬಂಧಿತ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Back to top button