ಬ್ರಹ್ಮಾವರ: ಕಪ್ಪೆ ಚಿಪ್ಪು ತೆಗೆಯಲು ಹೋದ ವ್ಯಕ್ತಿ ಹೊಳೆಯಲ್ಲಿ ಮುಳುಗಿ ಮೃತ್ಯು

ಉಡುಪಿ: ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನದ ಕೋಡಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸಾಸ್ತಾನ ಯಕ್ಷಿಮಠ ನಿವಾಸಿ ರಾಜು ಮರಕಾಲ (66) ಎಂದು ಗುರುತಿಸಲಾಗಿದೆ. ರಾಜು ಅವರು ನಿನ್ನೆ ಸಂಜೆ ಹೊಳೆಯಲ್ಲಿ ಕಪ್ಪೆ ಚಿಪ್ಪು ತೆಗೆಯಲೆಂದು ಹೋಗಿದ್ದರು. ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದರು‌. ಇಂದು ಬೆಳಿಗ್ಗೆ ಸಾಸ್ತಾನ ಕೋಡಿ ಹೊಳೆಯಲ್ಲಿ ಅವರ ಶವ ಪತ್ತೆಯಾಗಿದೆ. ಮಾಹಿತಿ ತಿಳಿದು ತಕ್ಷಣ ಸ್ಥಳಕ್ಕೆ ಆಗಮಿಸಿದ ಕೋಟ ಪೊಲೀಸರು ಕಾರ್ಯಾಚರಣೆ ನಡೆಸಿ ದೋಣಿಯಲ್ಲಿ ಶವವನ್ನು ದಡಕ್ಕೆ ತಂದಿದ್ದಾರೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories