ಬ್ರಹ್ಮಾವರ: ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲು

ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದ ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಹೊಸಾಳ ಗ್ರಾಮದ ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತಪಟ್ಟವರು ಎಂದು ತಿಳಿದು ಬಂದಿದೆ.

ಬೆಳಿಗ್ಗೆ ಮೀನು ಹಿಡಿಯಲೆಂದು ನಾಗರಮಠದ ಸೀತಾ ನದಿಗೆ ಹೋಗಿದ್ದರು. ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ.

ಮುಳುಗುತ್ತಿರುವವರ ರಕ್ಷಣೆಗೆ ಯತ್ನಿಸಿದ ಸ್ಥಳೀಯರು, ನೀರಿನ ಸೆಳೆತ ಹಿನ್ನಲೆ ವಿಫಲರಾಗಿದ್ದಾರೆ‌

ಅಗ್ನಿಶಾಮಕ ಸಿಬ್ಬಂದಿ, ಈಜು ತಜ್ಞ ಈಶ್ವರ್ ಮಲ್ಪೆ ಹಾಗೂ ಸ್ಥಳೀಯರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Latest Indian news

Popular Stories