ಉಡುಪಿ : ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದುಕೊಂಡು ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಚುನಾವಣೆಗೆ ಸ್ಪರ್ಧಿಸುವುದರ ಮೂಲಕ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರನ್ನು ಉಚ್ಛಾಟಿಸಲಾಗಿದೆ.
ಲೋಕೇಶ್ ಖಾರ್ವಿ ಹಾಗೂ ಅವರಿಗೆ ಸಹಕರಿಸಿದ ಪಂಚಾಯತ್ ಸದಸ್ಯರಾದ ಸುಧಾಕರ್ ಆಚಾರ್ಯ,ಸುಶೀಲಾ ಖಾರ್ವಿ ಮತ್ತು ಜ್ಯೋತಿ ಶೆಟ್ಟಿ ಇವರನ್ನು ಬೈಂದೂರು ಮಂಡಲ ಅಧ್ಯಕ್ಷರ ಶಿಫಾರಸ್ಸಿನ ಮೇರೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ ನಾಯಕ್ ರವರ ಸೂಚನೆಯಂತೆ 6 ವರ್ಷಗಳ ಕಾಲ ಬಿಜೆಪಿ ಯಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್ ಕಲ್ಮಾಡಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.