UdupiFeatured Story

ತಿಮಿಂಗಲದ ಅಂಬರ್ಸ್ ಎಂದು ಹೇಳಿ ವಂಚನೆಗೆ ಯತ್ನ: ಬೈಂದೂರಿನಲ್ಲಿ ಮೂವರ ಬಂಧನ

ಬೈಂದೂರು: ಬುಧವಾರ ಸಂಜೆ ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ಸ್ ಎಂದು ಹೇಳಿ 10 ಲಕ್ಷ ರೂ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ.

IMG 20230713 WA0051 Udupi, Featured Story

ಬಂಧಿತರನ್ನು ನಿರಂಜನ್ ಎಸ್ ಪ್ರಾಯ 26 ವರ್ಷ, ಮಿಲನ್‌ ಮೋನಿಶ್ ಶೆಟ್ಟಿ ಪ್ರಾಯ 27 ವರ್ಷ, ಮತ್ತು ಪೃಥ್ವಿ ಡಾಮ್ಮಿಕ್ ಪ್ರಾಯ 31 ವರ್ಷ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದುಕೊಂಡು ಅವರಿಂದ ಸುಮಾರು 3 ಕೆ.ಜಿ 910 ಗ್ರಾಂ ತೂಕದ ತಿಮಿಂಗಲದ ಅಂಬರ್‌ಗ್ರಿಸ್ ನಂತಿರುವ ವಸ್ತುವನ್ನು ಸ್ವಾಧೀನಡಿಸಿಕೊಂಡು ಆರೋಪಿತರನ್ನು ದಸ್ತಗಿರಿ ಮಾಡಿದ್ದು ಇವರ ಮೇಲೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ 1/2023 ಕಲಂ 420 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಸಿಕೊಂಡು ತನಿಖೆಯನ್ನು ಕೈಗೊಳ್ಳಲಾಗಿರುತ್ತದೆ.

ಈ ರೀತಿ ಮೇಣದಂತಹ ವಸ್ತುವಿಗೆ ತಿಮಿಂಗಲದ ಅಂಬರ್‌ಗ್ರಿಸ್ ಎಂದು ಸುಳ್ಳು ಹೇಳ ಸಾರ್ವಜನಿಕರನ್ನು ನಂಬಿಸಿ ಮೋಸ ಮಾಡುವ ಜಾಲವು ಸಕ್ರಿಯವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಎಚ್ಚರಿಂದ ಇರುವಂತೆಯೂ, ಈ ರೀತಿಯ ಯಾವುದೇ ಆಮಿಷಕ್ಕೆ ಒಳಗಾಗಬಾರದೆಂದು ಮತ್ತು ಈ ರೀತಿಯ ಯಾವುದೇ ಮಾಹಿತಿ ಇದ್ದಲ್ಲಿ ಪೊಲೀಸ್‌ ಠಾಣೆಗೆ ತಿಳಿಸವುದು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button