ಬೈಂದೂರು: ಮನೆಯ ಗೇಟ್ ಮುಂಭಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಬೈಂದೂರು: ಮನೆಯ ಗೇಟ್ ಮುಂಭಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಹಡವಿನಕೋಣೆ ಮುದ್ರುಮಕ್ಕಿ ಸಮೀಪದ ನಿವಾಸಿ ಕುರುಡಿ ಇರ್ಷಾದ್ (52) ಮೃತಪಟ್ಟಿದ್ದಾರೆ.

ಘಟನೆ ವಿವರ: ಶನಿವಾರ ತಡರಾತ್ರಿ ಸುರಿದ ಗಾಳಿ ಮಳೆಗೆ ಹಡವಿನಕೋಣೆಯಿಂದ ಮುದ್ರುಮಕ್ಕಿಗೆ ತೆರಳುವ ಮಾರ್ಗದಲ್ಲಿದ್ದ ವಿದ್ಯುತ್‌ ತಂತಿ ತುಂಡಾಗಿ ಬಿದ್ದಿತ್ತು. ಇರ್ಷಾದ್ ಅವರು ಮನೆಯೊಳಕ್ಕೆ ಸತ್ತುಹೋದ ಇಲಿಯನ್ನು ಹೊರಕ್ಕೆ ಬೀಸಾಡುವ ಸಲುವಾಗಿ ಬೆಳಿಗ್ಗೆ ಗೇಟ್ ಹೊರಕ್ಕೆ ಬಂದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದು, ಈ ವೇಳೆ ವಿದ್ಯುತ್ ತಗುಲು ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ದೊರೆತ ತಕ್ಷಣ ಈ ಭಾಗದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಮೆಸ್ಕಾಂ ಸಂಬಂದಪಟ್ಟವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories