ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಂಸದರಾಗಿ ಚುನಾಯಿತರಾದ ನಂತರ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಸುವ ವಿಧಾನ ಪರಿಷತ್ ಸ್ಥಾನದ ಮರು ಚುನಾವಣೆ ಅಕ್ಟೋಬರ್ 21 ರಂದು ನಡೆಯಲಿದೆ.
ಬಿಜೆಪಿ- ಜೆಡಿಎಸ್ ಮ್ರೈತ್ರಿ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಯಾರಾಗಬಹುದೆಂಬ ಲೆಕ್ಕಚಾರದ ನಡುವೆ ಬಿಜೆಪಿಯ ಪ್ರಮೋದ್ ಮಧ್ವರಾಜ್ ಅವರಿಗೆ ಅವಕಾಶಗಳು ಹೆಚ್ಚಿದೆ ಎನ್ನಲಾಗುತ್ತಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾ.ಪಂ. ಗಳಲ್ಲಿ6,037 ಮಂದಿ ಅರ್ಹ ಮತದಾರರಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಪ್ರಮೋದ್ ಮಧ್ವರಾಜ್ ವಿಧಾನ ಪರಿಷತ್ ಸದಸ್ಯರಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಇನ್ನು ರೇಸ್ ನಲ್ಲಿ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಮಂದಿ ಇದ್ದಾರೆ. ಆದರೂ ಹಲವು ಬಾರಿ ಸ್ಥಾನ ವಂಚಿತ ಪ್ರಮೋದ್ ಮಧ್ವರಾಜ್ ಈ ಬಾರಿ ಟಿಕೆಟ್ ಗಿಟ್ಟಿಸುವ ಸಾಧ್ಯತೆ ದಟ್ಟವಾಗಿದೆ.
ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ ಹೆಸರುಗಳು ಮುಂಚೂಣಿಯಲ್ಲಿದೆ. ಆದರೆ ಮತದಾರರ ಸಂಖ್ಯೆಯಾಧಾರದಲ್ಲಿ ಇಲ್ಲಿ ಗೆಲುವು ಕಷ್ಟ ಸಾಧ್ಯ ಎನ್ನಲಾಗಿದೆ.