ಉಡುಪಿ, ಫೆ.12: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ.
ತನಿಖೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಮತ್ತು ಚಾರ್ಜ್‌ಶೀಟ್ ಸಲ್ಲಿಸಲು ಇಂದು ಕೊನೆಯ ದಿನವಾಗಿರುವುದರಿಂದ ಪ್ರಕರಣದ ತನಿಖಾಧಿಕಾರಿಗಳು ಈ ಸಂಬಂಧ ಚಾರ್ಜ್‌ಶೀಟ್ ಶನಿವಾರ ನ್ಯಾಯಾಲಯಕ್ಕೆ ಸಲ್ಲಿಸಿದರು ಎಂದು ತಿಳಿದು ಬಂದಿದೆ