ಡೆಂಗ್ಯೂ ಬಳಿಕ ಕಾಲರಾ ಭೀತಿ: ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಬೆನ್ನಲ್ಲೇ ಇದೀಗ ಕಾಲರಾ ಸೋಂಕಿನ ಆತಂಕ ಎದುರಾಗಿದೆ. ಉಡುಪಿ ಜಿಲ್ಲೆಯಲ್ಲಿ ಅತಿ ಹೆಚ್ಚು ಕಾಲರಾ ಸೋಂಕು ಪತ್ತೆಯಾಗಿದ್ದು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಲರ್ಟ್ ಘೋಷಿಸಿದ್ದಾರೆ.

ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ 11 ಕಾಲರಾ ಪ್ರಕರಣ ಪತ್ತೆಯಾಗಿದೆ.

ಕಾರ್ಕಳ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿಯೇ 5 ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಮಲ್ಪೆ, ಶಿರ್ವ, ಕಾಪು, ಕೆಮ್ಮಣ್ಣು ಪ್ರದೇಶಗಳಲ್ಲಿಯೂ ಕಾಲರಾ ಪ್ರಕರನ ಪತ್ತೆಯಾಗಿವೆ.

ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಸ್ವಚ್ಛತೆ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಸಮುದ್ರ ಉತ್ಪನ್ನಗಳನ್ನು, ತರಕಾರಿ,ಹಣ್ಣುಗಳನ್ನು ಶ್ವಚ್ಚವಾಗಿ ತೊಳೆದು ಉಪಯೋಗಿಸಿ. ಕೈಗಳನ್ನು ಸ್ವಚ್ಚವಾಗಿಟ್ಟುಕೊಳ್ಳಿ.

ರಸ್ತೆಬದಿ ಮಾರಾಟ ಮಡುವ ತಿಂಡಿ-ತಿನಿಸು, ಹಣ್ಣುಗಳನ್ನು ಸೇವಿಸಬೇಡಿ. ಶಾಲಾ-ಕಾಲೇಜು, ಅಂಗನವಾಡಿಗಳಲ್ಲಿ ಮಕ್ಕಳು ಸ್ವಚ್ಛತೆ ಬಗ್ಗೆ ಗಮನಹರಿಸುವಂತೆ ಸೂಚಿಸಿದ್ದಾರೆ.

Latest Indian news

Popular Stories