ಉಡುಪಿ ನೇತ್ರಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ ಸಂಬಂಧಿಸಿದಂತೆ ತನಿಖೆ ಸಿಐಡಿ ಗೆ ಹಸ್ತಾಂತರಿಸಿ ಆದೇಶಿಸಲಾಗಿದೆ.
ರಾಜ್ಯ ಸರಕಾರದಿಂದ ಮಹತ್ವದ ಆದೇಶ ಹೊರ ಬಂದಿದ್ದು ಭಾರೀ ಚರ್ಚೆಗೆ ಗ್ರಾಸವಾಗಿರುವ ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ ತನಿಖೆಯನ್ನು ಸಿ.ಐ.ಡಿಗೆ ನೀಡಲಾಗಿದೆ
ಮೂವರು ಮುಸಲ್ಮಾನ ವಿದ್ಯಾರ್ಥಿನಿಯರಿಂದ ಹಿಂದು ವಿದ್ಯಾರ್ಥಿನಿಯ ಚಿತ್ರೀಕರಣ ಮಾಡಿದ ಆರೋಪ ಕೇಳಿ ಬಂದಿತ್ತು.ಜುಲೈ 18 ರಂದು ನಡೆದಿದ್ದ ಘಟನೆ -ಜುಲೈ 26ರಂದು ಸುಮೋಟೋ ಕೇಸ್ ದಾಖಲಾಗಿತ್ತು.
ಎಬಿವಿಪಿ ಬಿಜೆಪಿ ಹಿಂದೂ ಸಂಘಟನೆ ಪ್ರತಿಭಟನೆ ಮಾಡಿತ್ತು.ಎಸ್ಐಟಿಗೆ ಪ್ರಕರಣದ ತನಿಖೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು. ಉಡುಪಿ ಜಿಲ್ಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.