ವೀಡಿಯೋ ಚಿತ್ರೀಕರಣ ಪ್ರಕರಣ: ಸಿ.ಐ.ಡಿ ತಂಡದಿಂದ ತನಿಖೆ ಪ್ರಾರಂಭ

ಉಡುಪಿ: ಇಲ್ಲಿನ ಖಾಸಗಿ ಅರೆವೈದ್ಯಕೀಯ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಸಿಐಡಿ ಡಿವ್ಯೆಎಸ್ಪಿ ಅಂಜುಮಾಲಾ ನಾಯಕ್ ನೇತ್ರತ್ವದ ತಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ತನಿಖಾಧಿಯಾಗಿದ್ದ ಬೆಳ್ಳಿಯಪ್ಪ ಸಹಿತ ಮಲ್ಪೆ ಠಾಣೆಯ ಪೊಲೀಸರು ಘಟನೆ ಹಾಗು ತನಿಖೆಯ ವರದಿಗಳನ್ನು ಸಿಐಡಿಗೆ ಹಸ್ತಾಂತರಿಸಿದರು. ಇನ್ನು ಮುಂದೆ ಅಂಜುಮಾಲಿ ನಾಯಕ್ ಈ ಪ್ರಕರಣದ ತನಿಖಾಧಿಕಾರಿಯಾಗಿ,ರಲಿದ್ದಾರೆ.

ಉಡುಪಿಯ ಖಾಸಗಿ ಅರೆವೈದ್ಯಕೀಯ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ಮಾಡಲಾಗಿದೆ ಎಂಬ ಆರೋಪ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡಿತ್ತು. ಸರಕಾರದಿಂದ ಪ್ರಕರಣದ ನಿರಾಕರಣೆ ವಿಪಕ್ಷವನ್ನು ಕೆರಳಿಸಿತ್ತು. ಸರಕಾರದ ಧೋರಣೆಯನ್ನು ಖಂಡಿಸಿ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದರು. ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ವಹಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದರು. ಇವೆಲ್ಲದಕ್ಕೂ ಮಣಿದ ಸರಕಾರ ಈಗ ಸಿಐಡಿ ತನಿಖೆಗೆ ವಹಿಸಿದೆ

Latest Indian news

Popular Stories