ಎಪ್ರಿಲ್ 2ರಂದು ಉಡುಪಿ ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಕಾಂಗ್ರೆಸ್ ಪಕ್ಷದ ಉಡುಪಿ ಚಿಕ್ಕ-ಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ ಜಯಪ್ರಕಾಶ್ ಹೆಗ್ಡೆ ಎಪ್ರಿಲ್‌ 2 ರಂದು ನಾಮಪತ್ರ ಸಲ್ಲಿಸುವ ಬಗ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಅಂದು ಬೆಳಿಗ್ಗೆ 9 ಗಂಟೆಗೆ ಕಾಂಗ್ರೆಸ್‌ ಭವನದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು ಆ ಸಭೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಉಸ್ತುವಾರಿಗಳು ಹಾಗೂ ಇಂಧನ ಸಚಿವ ಕೆ.ಜೆ ಜಾರ್ಜ್‌ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಭಾಗವಹಿಸುವ ನಿರೀಕ್ಷೆಯಿದೆ.

ಅಭ್ಯರ್ಥಿಗಳು ಅಂದು ಬೆಳಿಗ್ಗೆ 11.30 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿಯ ನೂತನ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ , ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, , ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ , ನಾಯಕರಾದ ಪ್ರಸಾದ್ ರಾಜ್ ಕಾಂಚನ್, ಉದಯ್‌ ಶೆಟ್ಟಿ ಮುನಿಯಾಲು , ದಿನೇಶ್‌ ಹೆಗ್ಡೆ ಮೊಳಹಳ್ಳಿ ಇವರುಗಳು ಭಾಗವಹಿಸಲಿದ್ದಾರೆ.

ಸಭೆಯಲ್ಲಿ ಜಯ ಪ್ರಕಾಶ್‌ ಹೆಗ್ಡೆ, ಎಂ.ಎ ಗಫೂರ್‌, ಕಿಶನ್‌ ಹೆಗ್ಡೆ ಕೊಳ್ಕೆಬೈಲು , ಬಿ ನರಸಿಂಹ ಮೂರ್ತಿ, ರಮೇಶ್‌ ಕಾಂಚನ್‌ , ದಿನೇಶ್‌ ಪುತ್ರನ್‌, ಭಾಸ್ಕರ್‌ ರಾವ್ ಕಿದಿಯೂರು, ಅಣ್ಣಯ್ಯ ಸೇರಿಗಾರ್‌, ಮುರಳಿ ಶೆಟ್ಟಿ, ಶಬ್ಬೀರ್‌ ಅಹಮದ್‌, ದಿವಾಕರ ಕುಂದರ್‌ , ಮಹಾಬಲ ಕುಂದರ್‌, ಆನಂದ ಪೂಜಾರಿ, ಪ್ರಶಾಂತ ಜತ್ತನ್ನ , ಉದ್ಯಾವರ ನಾಗೇಶ್‌ ಕುಮಾರ್‌ , ಕೀರ್ತಿ ಶೆಟ್ಟಿ , ರೋನಿ ಉದ್ಯಾವರ, ಗಣೇಶ್‌ ನೆರ್ಗಿ , ಸಂಜಯ್‌ ಆಚಾರ್ಯ ಉಪಸ್ಥಿತರಿದ್ದರು.

Latest Indian news

Popular Stories