ಉಡುಪಿ ಜಿಲ್ಲಾಡಳಿತದ ವತಿಯಿಂದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಕರ್ನಾಟಕ ಸರಕಾರದ ವತಿಯಿಂದ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಉಡುಪಿ ಜಿಲ್ಲಾ ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಲ್ಪೆ ಕಡಲ ತೀರದಲ್ಲಿ ಕೇಸರಿ ಬಿಳಿ ಹಸಿರು ಬಣ್ಣದ ಬೆಲೂನ್ ಗಳನ್ನು ಹಾರಿಸಿ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡುವುದರ ಮೂಲಕ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು .

ಬಳಿಕ ಸಂವಿಧಾನ ಪೀಠಿಕೆಯನ್ನು ಎಲ್ಲರಿಗೂ ಭೋದಿಸಿದರು. ಮುಖ್ಯ ಅತಿಥಿಗಳಾಗಿ ಡಾ. ಅರುಣ್ ಕುಮಾರ್ ಜಿಲ್ಲಾ ಪೋಲಿಸ್ ವರಿಷ್ಠ ಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್,ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅನಿತಾ ಮಲ್ದುರ್, ಸಹಾಯಕ ನಿರ್ದೇಶಕರಾದ ರೋಶನ್ ಕುಮಾರ್, ರಮೇಶ್ ನಾಯಕ್, ದಲಿತ ಮುಖಂಡರಾದ ಜಯನ್ ಮಲ್ಪೆ, ರಮೇಶ್ ಕೋಟ್ಯಾನ್, ಮಂಗಳೂರು ಆರನೇ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್, ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಬನ್ನಂಜೆ ಮೇಲ್ವಿಚಾರಕಿ ಸುಚಿತ್ರ ಮೊದಲಾದವರು ಉಪಸ್ಥಿತರಿದ್ದರು.

ಮರಳಿನ ಮೇಲೆ ಬಾಬಾ ಸಾಹೇಬ ಅಂಬೇಡ್ಕರ್ ಅವರ ಮತ್ತು ಸಂವಿಧಾನ ಪೀಠಿಕೆ ಯ ಚಿತ್ರವನ್ನು ಬರೆದು ಕ್ರಿಯಾಶೀಲ ಹಾಗೂ ವಿಶಿಷ್ಠ ರೀತಿಯಲ್ಲಿ ಸಾರ್ವಜನಿಕರಿಗೆ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಇದು ಜನ ಮೆಚ್ಚುಗೆಗೆ ಪಾತ್ರವಾಯಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ಮಂಗಳೂರಿನ ಖ್ಯಾತ ಬಾಲ ಪ್ರತಿಭೆ ಆಶ್ಮಿತ್ ಎ. ಜೇ ಅವರ ಬಳಗ
ಸುಮುಧುರ ಕಂಠ ದಲ್ಲಿ ಸಂವಿಧಾನ ಪೀಠಿಕೆ ಗೀತೆಯನ್ನು ಹಾಡಿದರು.

ಸಮಾಜ ಕಲ್ಯಾಣ ಇಲಾಖೆಯ ನಂತರ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ಬನ್ನಂಜೆ ಯ ವಿದ್ಯಾರ್ಥಿನಿಯರು ಮೇಲ್ವಿಚಾರಕಿ ಸುಚಿತ್ರ ಇವರ ನೇತೃತ್ವದಲ್ಲಿ ಅಂಬೇಡ್ಕರ್ ಅವರ ತತ್ವ ಮತ್ತು ಸಿದ್ಧಾಂತಗಳ ಕುರಿತ ಸುಂದರ ನೃತ್ಯವನ್ನು ಮನಮೋಹಕವಾಗಿ ಪ್ರಸ್ತುತ ಪಡಿಸಿದರು. ಶಿಕ್ಷಕ ಪ್ರಶಾಂತ್ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

Latest Indian news

Popular Stories