ಉಡುಪಿ:ಉಡುಪಿ ವಲಯದ ಶ್ರೀ ಸೋದೆ ವಾದಿರಾಜ ಮಠಎಜ್ಯುಕೇಶನ್ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿರುವ ಕಡಿಯಾಳಿ ಆಂಗ್ಲ ಮಾಧ್ಯಮ ಶಾಲೆಯು ಶಿಕ್ಷಣ ಇಲಾಖೆಯಲ್ಲಿ ನೋಂದಣಿಯಾಗದೇ ಇರುವುದರಿಂದ ಅನಧಿಕೃತ ಶಾಲೆ ಎಂದು ಪರಿಗಣಿಸಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶಿಸಿದ್ದಾರೆ.
ಪ್ರಸ್ತುತ ಉಚ್ಛ ನ್ಯಾಯಾಲಯ ಹಾಗೂ ಪ್ರಾಥಮಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಹೂಡಿರುವ ದಾವೆಯು ವಜಾಗೊಂಡಿರುವುದರಿಂದ ಸದ್ರಿ ಶಾಲೆಯನ್ನು ಮುಚ್ಚುವಂತೆ ಹಾಗೂ ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸದಂತೆ ಉಡುಪಿ ವಲಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶಿಸಿದ್ದಾರೆ