Udupi

Udupi | ಕೋಡಿಬೆಂಗ್ರೆ ಡೆಲ್ಟಾ ಬೀಚ್’ನಲ್ಲಿ ನೀರುಪಾಲಗಿದ್ದ ಪ್ರವಾಸಿಗನ‌ ಮೃತದೇಹ ಪತ್ತೆ

ಉಡುಪಿ, ಜ.27: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಕೋಡಿಬೆಂಗ್ರೆಯ ಡೆಲ್ಟಾ ಬೀಚ್‌ನ ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿತ್ತು. ಇದೀಗ ಅವರ ಶವ ಪತ್ತೆಯಾಗಿದೆ.

ಬೆಂಗಳೂರಿನ ಬ್ಯಾಂಕ್ ಉದ್ಯೋಗಿಯಾಗಿದ್ದ ನಿತೀನ್(35) ನಾಪತ್ತೆಯಾಗಿದ್ದರು.

ರಜೆಯ ಹಿನ್ನೆಲೆಯಲ್ಲಿ ಇಬ್ಬರು ಸ್ನೇಹಿತರೊಂದಿಗೆ ಉಡುಪಿಗೆ ಬಂದಿದ್ದ ಇವರು ಡೆಲ್ಟಾ ಬೀಚ್‌ಗೆ ತೆರಳಿದ್ದರು.
ಅಲ್ಲಿ ಸಮುದ್ರದ ನೀರಿನಲ್ಲಿ ಆಡುತ್ತಿರುವಾಗ ನಿತೀನ್ ಅಲೆಗಳೊಂದಿಗೆ ಕೊಚ್ಚಿ ಕೊಂಡು ಹೋಗಿ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಅವರ ಮೃತದೇಹ ಪತ್ತೆಯಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button