ಉಡುಪಿ ಜಿಲ್ಲಾಸ್ಪತ್ರೆಯ ಸರ್ಜನ್ ಆಗಿ ಡಾ. ಅಶೋಕ್ ಹೆಚ್. ಅಧಿಕಾರ ಸ್ವೀಕಾರ.

ಡಾ. ಅಶೋಕ್ ಹೆಚ್, ಎಂ.ಬಿ.ಬಿ.ಎಸ್, ಡಿ.ಪಿ.ಎಚ್ ಇವರು ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಜಿಲ್ಲಾ ಸರ್ಜನ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇವರೊಬ್ಬ ಅನುಭವಿ ವೈದ್ಯರಾಗಿ ಸೇವೆ ಸಲ್ಲಿಸಿದವರು.ಅಲ್ಲದೆ 2012ರ ಅತ್ಯುತ್ತಮ DAPCO ಅಧಿಕಾರಿಯಾಗಿ, 2013ರಲ್ಲಿ ಉಡುಪಿ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ, 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾಗಿ, ಜನ ಮೆಚ್ಚುಗೆ ಪಡೆದವರು.

ಉಡುಪಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಜವಾಬ್ದಾರಿ ಸ್ವೀಕರಿಸಿದ ಅಲ್ಪಾವಧಿಯಲ್ಲಿಯೇ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಂಚಲನ ಮೂಡಿಸಿ, ಆರೋಗ್ಯ ಇಲಾಖೆಯ ವಿವಿಧ ಹುದ್ದೆಗಳನ್ನು ಅಲಂಕರಿಸಿ, ಆ ಹುದ್ದೆಗಳಿಗೆ ನಿಷ್ಠೆಯಿಂದ ಸೇವೆ ಸಲ್ಲಿಸಿ ವೈದ್ಯಕೀಯ ಕ್ಷೇತ್ರಕ್ಕೆ ಗೌರವ ತಂದಿರುವ ಅಶೋಕ್ ರವರು ವಿಶೇಷ ಅನುಭವ ಹೊಂದಿದ್ದು ಇದೀಗ ಉಡುಪಿ ಜಿಲ್ಲಾ ಸರ್ಜನ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

Latest Indian news

Popular Stories