ಕುಂದಾಪುರ: ಗಂಗೊಳ್ಳಿ ಮೋವಾಡಿಯಲ್ಲಿ ಸೆ.12ರಂದು ಅಕ್ರಮ ಮರಳುಗಾರಿಕೆಗೆ ದಾಳಿ ನಡೆಸಿರುವ ಪೊಲೀಸರು ಐವರನ್ನು ಬಂಧಿಸಿದ್ದಾರೆ.


ಕಾರ್ಯಾಚರಣೆಯಲ್ಲಿ ನಾಲ್ವರು ಉತ್ತರ ಪ್ರದೇಶದ ಕಾರ್ಮಿಕರು ಹಾಗೂ ಸ್ಥಳೀಯ ರಾದ ಅಲ್ಟನ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಬಗ್ಗೆ ದೂರುಗಳು ಬಂದ ಹಿನ್ನೆಲೆ ಅಕ್ರಮ ಮರಳು ಅಡ್ಡೆಯ ಮೇಲೆ ಗಂಗೊಳ್ಳಿ ಠಾಣೆ ಪಿಎಸ್ಐ ಹರೀಶ್ ಆರ್. ಹಾಗೂ ಸಿಬ್ಬಂದಿಗಳ ತಂಡ ಈ ದಾಳಿ ನಡೆಸಿದೆ.