ಉಡುಪಿ: ಯುವತಿ ನಾಪತ್ತೆ

ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಸಿ.ಟಿ ಬಸ್ ನಿಲ್ದಾಣದ ಬಳಿ ಇರುವ ಪಿ.ಜಿ.ಯಲ್ಲಿ ವಾಸವಿದ್ದ ಅರ್ಚನಾ (19) ಎಂಬ ಯುವತಿಯು ನವೆಂಬರ್ 4 ರಿಂದ ಕಾಣೆಯಾಗಿರುತ್ತಾರೆ.

5 ಅಡಿ 2 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆ ಕಪ್ಪು ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾ”ತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಯುವಕ ನಾಪತ್ತೆ

ಉಡುಪಿ: ಉುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಬಸವರಾಜ್ (27) ಎಂಬ ಯುವಕನು ನವೆಂಬರ್ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಉದ್ದಮುಖ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

IMG 20231205 WA0043 Udupi

Latest Indian news

Popular Stories