ಉಡುಪಿ ಜಿಲ್ಲೆಯ ಹಲವೆಡೆ ರಾತ್ರಿಯಿಂದ ಸುರಿಯುತ್ತಿದೆ ಭಾರೀ ಮಳೆ; ಗುಡುಗು-ಮಿಂಚಿಗೆ ಕೆಲವೆಡೆ ವಿದ್ಯುತ್ ಕಂಬಕ್ಕೆ ಹಾನಿ!

ಉಡುಪಿ: ವಿಪರೀತ ಸೆಕೆಯಿಂದ ತತ್ತರಿಸಿದ್ದ ಕರಾವಳಿಯ ಜನತೆಗೆ ವರ್ಷಾಧಾರೆ ತಂಪೆರೆದಿದೆ. ವಿಪರೀತ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ತಾಪಮಾನ ಇಳಿಕೆಯಿಂದಾಗಿ ಕೊಂಚ ಸಮಾಧಾನ ತರಿಸಿದೆ.

ಉಡುಪಿ ಜಿಲ್ಲೆಯ ಉಡುಪಿ, ಮಣಿಪಾಲ, ಮಲ್ಪೆ,ಹೂಡೆ, ಪಡುಬಿದ್ರೆ, ಕಾಪು, ಶಿರ್ವ, ಕಾರ್ಕಳ, ಬೈಲೂರು, ಕುಂದಾಪುರ, ಬ್ರಹ್ಮಾವರ, ಬೈಂದೂರು ಮೊದಲಾದ ಭಾಗದಲ್ಲಿ ಶನಿವಾರ ಮುಂಜಾನೆಯವರೆಗೂ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ. ಈಗಲೂ ಮೋಡ ಕವಿದ ವಾತಾವರಣವಿದ್ದು ಮಳೆ ಮುಂದುವರಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಂಜೆಯ ವೇಳೆ ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ.

ಮಂಗಳೂರಿನ ಹೊರ ವಲಯ, ಸುರತ್ಕಲ್‌, ಹಳೆಯಂಗಡಿ ಪರಿಸರದಲ್ಲಿ ಶುಕ್ರವಾರ ಮುಂಜಾನೆ ಮತ್ತು ರಾತ್ರಿ ವೇಳೆ ಸಾಧಾರಣ ಮಳೆ ಸುರಿದಿತ್ತು.

Latest Indian news

Popular Stories