ಉಡುಪಿಯಲ್ಲಿ ಭಾರೀ ಮಳೆ !

ಉಡುಪಿ: ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಏಕಾಏಕೀ ಸುರಿದ ಭಾರೀ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಅಕ್ಟೋಬರ್ 22 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಸೋಮವಾರ ಕೂಡ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದ್ದ ಹವಾಮಾನ ಇಲಾಖೆ, ಇಂದು (ಮಂಗಳವಾರ) ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಿಗೆ ಸೋಮವಾರ ಹಳದಿ ಎಚ್ಚರಿಕೆ ನೀಡಲಾಗಿತ್ತು. ಈ ಜಿಲ್ಲೆಗಳಲ್ಲಿ 65 ಮಿಮೀ – 115.5 ಮಿಮೀ ಮಳೆಯಾಗಲಿದೆ ಎಂದು ಮುನ್ಸೂಚನೆ ಕೊಟ್ಟಿತ್ತು

Latest Indian news

Popular Stories