ಉಡುಪಿಯಲ್ಲಿ ಭಾರೀ ಮಳೆ; ಐದು ದಿನ ನಿರಂತರ ಸುರಿಯಲಿದೆ ಧಾರಕಾರ ಮಳೆ

ಉಡುಪಿ: ಶುಕ್ರವಾರ ರಾತ್ರಿಯಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲಲು ಆರಂಭಿಸಿದೆ. ಗಾಳಿ ಸಮೇತ ಭಾರಿ ಮಳೆಯಾಗುತ್ತಿದ್ದು ಮುಂದಿನ ಐದು ದಿನ ಧಾರಕಾರ ಮಳೆಯ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು-ಮಿಂಚು ಬಿರುಗಾಳಿಸಹಿತ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಈ ಮಳೆ ಮುಂದಿನ 5 ದಿನಗಳ ಕಾಲ ಮುಂದುವೆರೆಯಲಿದೆ ಎಂದು ಎಚ್ಚರಿಕೆ ನೀಡಿದೆ.

ಜೂನ್ 6 ರಿಂದ 8 ರವರೆಗೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮತ್ತು ಜೂನ್ 8 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

Latest Indian news

Popular Stories