ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ: ರಜೆ ಘೋಷಿಸಿದ ಹಲವು ಶಾಲಾ-ಕಾಲೇಜು!

ಉಡುಪಿ: ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.

ನದಿಗಳು ತುಂಬಿ ಹರಿಯುತ್ತಿದ್ದು ನೆರೆ ಸ್ಥಿತಿ ಏರ್ಪಟ್ಟಿದೆ. ಉಡುಪಿ ಜಿಲ್ಲಾಡಳಿತ ಶಾಲಾ-ಕಾಲೇಜಿಗೆ ರಜೆ ಘೋಷಿಸಿಲ್ಲ. ಆದರೆ ಸ್ಥಳೀಯ ಪರಿಸ್ಥಿತಿ ಅವಲೋಕಿಸಿ ಹಲವು ಶಾಲಾ-ಕಾಲೇಜು ರಜೆ ಘೋಷಿಸಿದೆ.

ಶಾಲಾ ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ. ಅದರಂತೆ ಜಿಲ್ಲೆಯ ಕೆಲವು ಶಾಲೆಗಳು ಈಗಾಗಲೇ ರಜೆ ಘೋಷಣೆ ಮಾಡಿದೆ ಎಂದು ತಿಳಿದು ಬಂದಿದೆ.

ಉಡುಪಿ ಜಿಲ್ಲೆಯ ಎಲ್ಲಾ ಏಳೂ ತಾಲೂಕಿನಲ್ಲಿ ನಿರಂತರ ಮಳೆ ಆಗುತ್ತಿಲ್ಲ. ರಾತ್ರಿ 10 ಗಂಟೆಯ ನಂತರ ಮಳೆ ಕೆಲವಡೆ ಕಡಿಮೆಯಾಗಿದ್ದು ಪರಿಸ್ಥಿತಿಯನ್ನು ನೋಡಿಕೊಂಡು ರಜೆ ಘೋಷಣೆ ಮಾಡುವ ಅಧಿಕಾರವನ್ನು ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Latest Indian news

Popular Stories