ಉಡುಪಿ: ಉಡುಪಿಯ ಕಾಪುವಿನಲ್ಲಿ ಕ್ರಿಕೆಟರ್ ಸೂರ್ಯ ಕುಮಾರ್ ಪತ್ನಿ ದೇವಿಶಾರೊಂದಿಗೆ ಮಾಧ್ಯಮದವರೊಂದಿಗೆ ಮಾತನಾಡಿ, ಕಾಪು ಮಾರಿಗುಡಿಗೆ ಬಂದು ಮನಸ್ಸಿಗೆ ಖುಷಿಯಾಗಿದೆ. ಐದು ವರ್ಷದ ಹಿಂದೆ ನಾವು ಒಮ್ಮೆ ಉಡುಪಿಗೆ ಬಂದಿದ್ದೆವು. ಮತ್ತೊಮ್ಮೆ ಕಾಪು ಅಮ್ಮನ ಭೇಟಿ ಮಾಡಬೇಕು ಎಂಬ ಇಚ್ಛೆ ಇತ್ತು. ಯಾವುದೇ ಟೂರ್ನಿ ಇಲ್ಲದಿದ್ದರೆ ದೇಗುಲ ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಬರುತ್ತೇವೆ. ಕಾಪು ಮಾರಿಯಮ್ಮನನ್ನು ನೋಡಲು ಪತಿಯನ್ನೂ ಕರೆದುಕೊಂಡು ಬಂದಿದ್ದೇನೆ. ದೇವಿಯಲ್ಲಿ ಏನು ಪ್ರಾರ್ಥಿಸಿದ್ದೇನೆ ಎಂದು ಹೇಳುವುದಿಲ್ಲ. ದೇವರಿಗೆ ಸೇವೆ ಕೊಡಬೇಕು ಎಂಬ ಸಂಕಲ್ಪ ಇತ್ತು ಎಂದರು.
ದೇವರಿಗೆ ಸಲ್ಲಿಸಿದ ಕಾಣಿಕೆಯನ್ನು ಹೇಳಿಕೊಳ್ಳಲು ಇಷ್ಟವಿಲ್ಲ. ಭಾರತವನ್ನು ಪ್ರತಿನಿಧಿಸಬೇಕು ಮತ್ತು ವರ್ಲ್ಡ್ ಕಪ್ ಗೆಲ್ಲಬೇಕು ಎಂಬುದು ಎಲ್ಲಾ ಕ್ರಿಕೆಟ್ ಗಳ ಕನಸು. ಒಂದು ಕನಸು ಸಾಕಾರಗೊಂಡಿದೆ ಎಂಬ ಖುಷಿ ಇದೆ . ಇಂತಹ ಹಲವಾರು ಕನಸುಗಳನ್ನು ಕಂಡು ಮುಂದೆ ಸಾಗಬೇಕಾಗಿದೆ ಎಂದರು.
ಕಾಪು ಮಾರಿಯಮ್ಮನ ದರ್ಶನ ಮಾಡಿದ ಮೇಲೆ ಮನಸ್ಸಿಗೆ ಬಹಳ ನೆಮ್ಮದಿಯಾಯಿತು.ಪೂಜೆ ಸಲ್ಲಿಕೆ ಮಾಡಿ ಶಾಂತಿ ಪ್ರಾಪ್ತಿಯಾದ ಅನುಭವವಾಯ್ತು.
ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭ ಬರಬೇಕು ಎಂಬ ಇಚ್ಛೆ ಇದೆ ಎಂದ ಅವರು ಆ ಸಂದರ್ಭದಲ್ಲಿ ಅವಕಾಶ ಸಿಕ್ಕರೆ ಖಂಡಿತವಾಗಿ ಬರುತ್ತೇನೆ ಎಂದರು.
ವರ್ಲ್ಡ್ ಕಪ್ ಸೆಲೆಬ್ರೇಶನ್ ಜನಸ್ತೋಮ ನೋಡಿ ಬಹಳ ಖುಷಿಯಾಯಿತು. ಕಾಪುವಿನಲ್ಲಿ ಕೂಡ ಜನರು ಪ್ರೀತಿಯಿಂದ ಬರಮಾಡಿಕೊಂಡದ್ದು ಮನಸ್ಸಿಗೆ ಮುಟ್ಟಿತು. ದೇವಸ್ಥಾನದಲ್ಲಿ ಇಷ್ಟು ಮಂದಿ ಸೇರುತ್ತಾರೆ ಎಂಬ ನಿರೀಕ್ಷೆ ಇರಲಿಲ್ಲ.
‘ಕಾಪುದ ಅಮ್ಮ’ (ಕಾಪುವಿನ ತಾಯಿ) ಎಂದು ತುಳುವಿನಲ್ಲಿ ಮಾತನಾಡಿದ ಕ್ರಿಕೆಟರ್ ಸೂರ್ಯ ಕುಮಾರ್ ಯಾದವ್, ಟೀಮ್ ಇಂಡಿಯಾ ಕಪ್ತಾನನಾಗಿ ಕಾಪುವಿಗೆ ಬನ್ನಿ – ಅರ್ಚಕರ ಪ್ರಾರ್ಥನೆ ಮಾಡಿದಾಗ, ತಂಡದ ಕಪ್ತಾನ ಆಗೋದು ನಮ್ಮ ಕೈಯಲ್ಲಿಲ್ಲ. ದೇಶಕ್ಕಾಗಿ ಚೆನ್ನಾಗಿ ಆಡುವುದು ಮಾತ್ರ ನಮ್ಮ ಗುರಿ ಎಂದರು.
ದೇವರು ಇಚ್ಚಿಸಿದರೆ ಹಣೆಯಲ್ಲಿ ಬರೆದಂತೆ ಆಗುತ್ತದೆ. ಕರಾವಳಿಯ ಬೇರೆ ಬೇರೆ ದೇವಸ್ಥಾನಗಳಿಗೆ ಹೋಗಿದ್ದೇವೆ ಮನಸ್ಸಿಗೆ ಶಾಂತಿ ಸಿಕ್ಕಿದೆ. ನಾನೊಬ್ಬ ಸಾಮಾನ್ಯ ವ್ಯಕ್ತಿಯಾಗಿ ಬಂದಿದ್ದೇನೆ. ನಾನು ಯಾವುದೇ ಸೆಲೆಬ್ರಿಟಿಯಾಗಿ ಬಂದಿಲ್ಲ. ನಾನೊಬ್ಬ ಸೆಲೆಬ್ರಿಟಿ ಎಂಬ ಆಲೋಚನೆಯ ನನಗೆ ಬಂದಿಲ್ಲ. ಸಾಮಾನ್ಯ ವ್ಯಕ್ತಿಯಾಗಿ ದೊಡ್ಡ ಜೀವನವನ್ನು ಸಾಗಿಸಬೇಕಾಗಿದೆ ಎಂದರು.
ವರ್ಲ್ಡ್ ಕಪ್ ಅನ್ನೋದು ಇಡೀ ಜೀವನ ಅಲ್ಲ ಅದೊಂದು ಭಾಗ. ಜೀವನದಲ್ಲಿ ಇಂತಹ ಹಲವನ್ನು ನೋಡುತ್ತಾ ಸಾಗಬೇಕಾಗಿದೆ. ಮಂಗಳೂರಿನಲ್ಲಿ ಆನಿವರ್ಸರಿಯನ್ನು ಆಚರಿಸಿಕೊಂಡಿದ್ದೇವೆ. ಜೀವನದಲ್ಲಿ ಒಂದೇ ಬಾರಿ ಇಷ್ಟು ಕೇಕ್ ಗಳನ್ನು ನಾನು ಕಟ್ ಮಾಡಿ ತಿಂದಿಲ್ಲ ಎಂದು ಖುಷಿ ಪಟ್ಟರು.
ಕ್ಯಾಚ್ ಹಿಡಿದು ಎಂಟು ದಿವಸ ಆಯಿತು ಆನಿವರ್ಸರಿ ಕಳೆದು ಎಂಟು ದಿವಸ ಆಯಿತು. ಸೂರ್ಯ ಕುಮಾರ್ ಕ್ಯಾಚ್ ಬಗ್ಗೆ ಚರ್ಚೆ ವಿವಾದ ವಿಚಾರವಾಗಿ ಪ್ರತಿಕ್ರಿಯಿಸಿ, ಕ್ಯಾಚ್ ಹಿಡಿಯುವ ಸಂದರ್ಭ ನಾನು ಬೌಂಡರಿ ಲೈನ್ ಟಚ್ ಮಾಡಿಲ್ಲ. ಪ್ರಪಂಚದ ಎಲ್ಲಾ ಜನರನ್ನ ಖುಷಿ ಪಡಿಸಲು ಸಾಧ್ಯವಿಲ್ಲ. ದೇವರ ಆಶೀರ್ವಾದದಿಂದ ನಾನು ಆ ಸಂದರ್ಭ ಆ ಜಾಗದಲ್ಲಿ ಇದ್ದೆ.ಅಂತಹ ಒಂದು ಅದ್ಭುತ ಕ್ಯಾಚ್ ಹಿಡಿಯುವ ಅವಕಾಶ ನನಗೆ ಸಿಕ್ಕಿತು.ನಾನು ಮೈದಾನಕ್ಕೆ ಇಳಿಯುವಾಗ ಬಬುಲ್ ಗಂ ಹಾಕಲು ಇಷ್ಟಪಡುತ್ತೇನೆ. ಬ್ಯಾಟಿಂಗ್ ಮಾಡಲು ಮತ್ತು ಚೆನ್ನಾಗಿ ಆಡಲು ಬಬುಲ್ ಗಂ ಜಗಿಯುವುದು ನನಗೆ ಖುಷಿ ಕೊಡುತ್ತದೆ. ಬಬುಲಗಾಂ ಜಗಿಯುತ್ತ ನಾನು ಆ ಸಂದರ್ಭವನ್ನು ಇಷ್ಟಪಡುತ್ತೇನೆ ಎಂದರು.
ಒಂದು ಸಣ್ಣ ಚಿವಿಂಗ್ ಗಂ ಹಾಕಿಕೊಂಡು ನಾನು ಆ ಸಂದರ್ಭವನ್ನು ಸಂಭ್ರಮಿಸುತ್ತೇನೆ. ಪ್ರಾಕ್ಟೀಸ್ ಮಾಡುವಾಗ ಅಂತಹ ಕ್ಯಾಚ್ಗಳನ್ನ ಹಿಡಿಯಲು ನಾವು ತರಬೇತಿ ಪಡೆಯುತ್ತೇವೆ. ದೇಶಕ್ಕೆ ಕಪ್ ತಂದುಕೊಡಲು ಅಂತಹ ಸಂದರ್ಭವನ್ನು ದೇವರ ಸೃಷ್ಟಿ ಮಾಡಿದ್ದಾನೆ. ಆ ಸಂದರ್ಭದಲ್ಲಿ ನಾನು ದೇವರನ್ನು ನೆನೆದುಕೊಂಡೆ ಎಂದರು.