ಇಂದ್ರಾಳಿ ಸೇತುವೆ ಕಾಮಗಾರಿ: .15ರೊಳಗೆ ಪೂರ್ಣಗೊಳಿಸುವ ಬಗ್ಗೆ ಗುತ್ತಿಗೆದಾರರಿಂದ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ – ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ, ಅ.23: ಇಂದ್ರಾಳಿ ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿ ಎಲ್ಲ ಸಲಕರಣೆಗಳು ಬಂದಿದ್ದು, ಈಗಾಗಲೇ ವಿಳಂಬವಾಗಿರುವುದರಿಂದ ಈ ಕಾಮ ಗಾರಿಯನ್ನು ಜ.15ರೊಳಗೆ ಪೂರ್ಣಗೊಳಿಸುವ ಬಗ್ಗೆ ಗುತ್ತಿಗೆದಾರರಿಂದ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಮಾಡಿಕೊಳ್ಳಲಾಗಿದೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.


ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿಯನ್ನು ಬುಧವಾರ ವೀಕ್ಷಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತಿದ್ದರು. ಇಂದ್ರಾಳಿ ಸೇತುವೆ ಕಾಮಗಾರಿ ವಿಳಂಬದಿಂದಾಗಿ ಅಪಘಾತಗಳು ಸಂಭವಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ಕುರಿತ ಟೀಕೆ ಟಿಪ್ಪಣಿಗಳನ್ನು ಗಮನಿಸುತ್ತಿದ್ದೇವೆ ಎಂದರು.


2018ರಲ್ಲಿ ಆರಂಭವಾದ ಕಾಮಗಾರಿಯು ವಿವಿಧ ಕಾರಣಗಳಿಂದ ವಿಳಂಬವಾಗಿದೆ. ಆಗ 38 ಮೀಟರ್ ಸೇತುವೆ ಉದ್ದ ಈಗ 58 ಮೀಟರ್‌ಗೆ ಹೆಚ್ಚಿಸಲಾಗಿದೆ. ಸಿವಿಲ್ ಕಾಮಗಾರಿ ಸೇರಿದಂತೆ ಸೇತುವೆಯ ಒಟ್ಟು ವೆಚ್ಚ 13ಕೋಟಿ ರೂ. ಆಗಿದೆ. ಈ ಹಿಂದೆ ಸೇತುವೆಗೆ 138 ಟನ್ ಕರ್ಡರ್‌ಗಳ ಸ್ಟೀಲ್ ಬೇಕಾಗಿತ್ತು. ಈಗ ಅದರ ಪ್ರಮಾಣ 420 ಟನ್‌ಗೆ ಏರಿಕೆಯಾಗಿದೆ ಎಂದು ಅವರು ತಿಳಿಸಿದರು.


ಸೇತುವೆ ಕಾಮಗಾರಿ ಸಂಬಂಧ ನಾನು ಹಲವು ಬಾರಿ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅದೇ ರೀತಿ ಡಿಸಿ ಎಸ್ಪಿಯವರ ಸಮಕ್ಷಮದಲ್ಲಿಯೂ ಸಭೆ ನಡೆಸಿ, ಜ.15ರೊಳಗೆ ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ಬಗ್ಗೆ ನಿರ್ಧಾರ ತೆಗೆದು ಕೊಳ್ಳಲಾಗಿದೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಗುತ್ತಿಗೆದಾರರಿಂದ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.


ಒಂದೆರೆಡು ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಿ ಜ.15ರೊಳಗೆ ಪೂರ್ಣಗೊಳಿಸುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇವೆ. ಜನಸಾಮಾನ್ಯರಿಗೆ ತೊಂದರೆ ಆಗದ ರೀತಿಯಲ್ಲಿ ಕಠಿಣ ಕ್ರಮ ತೆಗೆದು ಕೊಳ್ಳಲಾಗಿದೆ. ಇದು ಬಹಳ ಸೂಕ್ಷವಾದ ಕಾಮಗಾರಿ ಆಗಿರುವುದರಿಂದ ಎಲ್ಲ ಕಾಮಗಾರಿಗಳನ್ನು ರೈಲ್ವೆ ಇಲಾಖೆಯ ಕಣ್ಗಾವಲಿನಲ್ಲಿ ನಡೆಸಲಾಗುತ್ತದೆ ಎಂದು ಅವರು ಹೇಳಿದರು

Latest Indian news

Popular Stories