Udupi

ಇಂದು ಉಡುಪಿಯಲ್ಲಿ “ಸುದೃಢ ಕುಟುಂಬ, ಸುಭದ್ರ ಸಮಾಜ” ವಿಚಾರಗೋಷ್ಠಿ ಮತ್ತು ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

ಉಡುಪಿ : ಜಮಾಅತೆ ಇಸ್ಲಾಮೀ ಹಿಂದ್ ಉಡುಪಿ ಘಟಕದ ವತಿಯಿಂದ “ಸುದೃಢ ಕುಟುಂಬ, ಸುಭದ್ರ ಸಮಾಜ” ಎಂಬ ಶೀರ್ಷಿಕೆಯಡಿಯಲ್ಲಿ ಶುಕ್ರವಾರ ಸಂಜೆ 6-30 ಕ್ಕೆ ಉಡುಪಿಯ ಅವೆ ಮರಿಯಾ (ಡಾನ್ ಬಾಸ್ಕೋ ಹಾಲ್) ಮದರ್ ಆಫ್ ಸಾರೋಸ್ ಚರ್ಚ್ನಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಣಿಪಾಲ ಪೋಲೀಸ್ ಠಾಣೆಯ ಠಾಣಾಧಿಕಾರಿಗಳಾದ ರಾಘವೇಂದ್ರ, ಸುಗಮ್ಯ ಮಹಿಳಾ ಸಂಘ ಉಡುಪಿ ಇದರ ಸ್ಥಾಪಕಧ್ಯಕ್ಷರಾದ ಜನೇಟ್ ಬರ್ಬೋಝ, ಡಾ. ಎ ವಿ ಬಾಳಿಗ ಮೆಮೋರಿಯಲ್ ಆಸ್ಪತ್ರೆಯ ಮನೋ ವೈದ್ಯರಾದ ಡಾ. ಮಾನಸ್ ಇ ಆರ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿಯಾದ ಮಹಮ್ಮದ್ ಕುಂಞಿಯವರು ವಹಿಸಲಿದ್ದಾರೆ ಈ ಕಾರ್ಯಕ್ರಮದಲ್ಲಿ ಪ್ರವಾದಿ ಮುಹಮ್ಮದ್(ಸ) ರ ಕುರಿತಂತೆ ಉಡುಪಿ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಿದ್ದು ಆ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಕೂಡ ನಡೆಸುವುದಾಗಿ ಕಾರ್ಯಕ್ರಮದ ಸಂಚಾಲಕರಾದ ರಯೀಸ್ ಅಹಮದ್ ಶೇಕ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button