ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ರೆಕ್ಟರ್ ವಂ|ವಲೇರಿಯನ್ ಮೆಂಡೊನ್ಸಾ ನಿಧನ


ಉಡುಪಿ: ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ರೆಕ್ಟರ್ ವಂ|ವಲೇರಿಯನ್ ಮೆಂಡೋನ್ಸಾ ಅವರು ಬುಧವಾರ ಹೃದಯಾಘಾತದಿಂದ ನಿಧನ ಹೊಂದಿದರು ಅವರಿಗೆ 75 ವರ್ಷ ವಯಸ್ಸಾಗಿತ್ತು.


ಶಿರ್ವ ಸಮೀಪದ ಪಿಲಾರ್ ಚರ್ಚಿನಲ್ಲಿ 1949 ರ ಡಿಸೆಂಬರ್ 9 ರಂದು ಜನಿಸಿದ್ದ ಅವರಿಗೆ 1976 ರ ಮೇ 7 ರಂದು ಗುರುದೀಕ್ಷೆ ಲಭಿಸಿತ್ತು. ಬಳಿಕ ವಿವಿಧ ಚರ್ಚುಗಳಲ್ಲಿ ಸಹಾಯಕ ಧರ್ಮಗುರುಗಳಾಗಿ, ಧರ್ಮಗುರುಗಳಾಗಿ, ಕಾಲೇಜಿನ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು.


ಪ್ರಸ್ತುತ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಪ್ರಧಾನ ಧರ್ಮಗುರುವಾಗಿ ಸೇವೆ ಸಲ್ಲಿಸುತ್ತಿದ್ದ ವಂ|ವಲೇರಿಯನ್ ಮೆಂಡೊನ್ಸಾ ಖ್ಯಾತ ಸಂಗೀತಗಾರರು ಕೂಡ ಆಗಿದ್ದು ಅವರ ಹಲವಾರು ಭಕ್ತಿಗೀತೆಗಳ ಧ್ವನಿಸುರುಳಿಗಳು ಪ್ರಕಟಗೊಂಡಿವೆ

Latest Indian news

Popular Stories