
Udupi
ಕಾಪು: ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಒತ್ತಾಯಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್ )ನಿಂದ ದೂರು
ಉಡುಪಿ: ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ಬಂಧನಕ್ಕೆ ಒತ್ತಾಯಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್ ) ಉಡುಪಿ ಜಿಲ್ಲೆ ವತಿಯಿಂದ ಡಿ. 26ರಂದು ಕಾಪು ಠಾಣೆಯಲ್ಲಿ ದೂರು ನೀಡಲಾಯಿತು.
ಮುಸ್ಲಿಂ ಮಹಿಳೆಯರ ವಿರುದ್ಧ ಅವ ಹೇಳನಕಾರಿ ಹೇಳಿಕೆ ನೀಡಿದ, ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡಿದ ಹಾಗೂ ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ಉಂಟು ಮಾಡಿದ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಕಾಪು ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲೆ ಅಧ್ಯಕ್ಷರಾದ ನಾಝಿಯ ನಸ್ರುಲ್ಲ, ಕಾರ್ಯದರ್ಶಿ ಹಾಜಿರ ಉಚ್ಚಿಲ, ವಿಮ್ ಕಾಪು ಘಟಕದ ಕಾರ್ಯದರ್ಶಿ ನೌಶಿನ್ ಮತ್ತು ಕಾಪು ಘಟಕದ ಪದಾಧಿಕಾರಿಯಾದ ವಹಿದಾ ಶರೀಫ್ ರವರು ಉಪಸ್ಥಿತರಿದ್ದರು.



