ಕಾಪುವಿನ ಪಾಂಗಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾಳಾಗಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟಿದ್ದಾನೆ.
ಮೃತರನ್ನು ಕಾರು ಚಾಲಕ ನಾಗೇಶ್ (70) ಎಂದು ಗುರುತಿಸಲಾಗಿದೆ.
ಕಾಪುವಿನ ಮೆಸ್ಕಾಂ ಗೆ ಗುತ್ತಿಗೆ ಆಧಾರಿತ ಕಾರನ್ನು ಚಲಾಯಿಸುತ್ತಿದ್ದ ಇವರು, ಸಂಜೆ ಪಾಂಗಾಳದಿಂದ ಕಾಪು ಕಡೆಗೆ ತೆರಳುತ್ತಿದ್ದಾಗ ದುರ್ಘಟನೆ ವರದಿಯಾಗಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.