ಕಾಪು: ಅಪಘಾತದಲ್ಲಿ ಮೃತಪಟ್ಟ ಯುವಕನ ಅಂಗಾಂಗ ದಾನ

ಕಾಪು, ಆ.4: ರಸ್ತೆ ದಾಟುವಾಗ ಟ್ರಕ್ ಡಿಕ್ಕಿ ಹೊಡೆದು ಮಣಿಪಾಲ ಆಸ್ಪತ್ರೆಗೆ ದಾಖಲಾದ ಉದ್ಯಾವರದ ಬೋಳಾರಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ (37) ಮೆದುಳು ನಿಷ್ಕ್ರಿಯಗೊಂಡಿತ್ತು. ಮಣಿಪಾಲ ಆಸ್ಪತ್ರೆಯಲ್ಲಿ ಮೆದುಳು ನಿಷ್ಕ್ರಿಯಗೊಂಡ ಕುಟುಂಬಸ್ಥರು ಮಾನವೀಯತೆ ಮೆರೆದಿದ್ದಾರೆ. ಇದೀಗ ಪ್ರಶಾಂತ್ ಅವರ ಅಂಗಾಂಗಗಳನ್ನು ದಾನ ಮಾಡಲಾಗಿದೆ.

ಪ್ರಶಾಂತ್ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಕನ್ನಿ ಪಾರ್ಟಿಯ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಬುಧವಾರ ಕೆಲಸ ಮುಗಿಸಿ ಮನೆಗೆ ತೆರಳುವ ಸಲುವಾಗಿ ಉದ್ಯಾವರದ ಹಲೀಮಾ ಸಾಬ್ಜು ಸಭಾಂಗಣ ಬಳಿ ಹೆದ್ದಾರಿ ದಾಟುತ್ತಿದ್ದರು. ಲಾರಿಯೊಂದು ಡಿಕ್ಕಿ ಹೊಡೆದು ಪ್ರಶಾಂತ್ ತಲೆಗೆ ತೀವ್ರ ಪೆಟ್ಟಾಗಿದೆ.


ಪ್ರಶಾಂತ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಮಣಿಪಾಲ ಆಸ್ಪತ್ರೆಯ ವೈದ್ಯರು ಪ್ರಶಾಂತ್ ಅವರ ಕುಟುಂಬ ಸದಸ್ಯರಿಗೆ ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸಿದ್ದರು. ಅದಕ್ಕೆ ಅವರ ಸಹೋದರಿ ಪ್ರಮೀಳಾ ಸಹಮತ ವ್ಯಕ್ತಪಡಿಸಿದ್ದಾರೆ. ಅದರಂತೆ ಪ್ರಶಾಂತ್‌ನ ಕಿಡ್ನಿ ಮತ್ತು ಲಿವರ್‌ಗಳನ್ನು ಪಡೆದು ಸುರಕ್ಷಿತವಾಗಿ ಮಂಗಳೂರು ಮತ್ತು ಬೆಂಗಳೂರಿಗೆ ಸಾಗಿಸಲಾಯಿತು.

ಪ್ರಶಾಂತ್ ಅವಿವಾಹಿತರಾಗಿದ್ದರು ಮತ್ತು ಅವರ ಕುಟುಂಬದ ಏಕೈಕ ಆಸರೆ ಕೂಡ. ಅವರು ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ. ಅಂಕುದ್ರುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಅಪಘಾತಕ್ಕೆ ಕಾರಣರಾದ ಟ್ರಕ್ ಚಾಲಕ ಜಗನ್ನಾಥ್ ವಿರುದ್ಧ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Latest Indian news

Popular Stories