
Udupi
ಕಾಪು: ಮೊದಲ ಮಳೆಗೆ ನೆರೆ ಭೀತಿ ಎದುರಿಸಿದ ರಾಷ್ಟ್ರೀಯ ಹೆದ್ದಾರಿ!
ಕಾಪು: ರಾಷ್ಟ್ರೀಯ ಹೆದ್ದಾರಿ 66 ಮೊದಲ ಮಳೆಗೆ ನೆರೆ ಭೀತಿ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿ ಕೆರೆಯಂತಾಗಿದ್ದು ವಾಹನ ಸಂಚಾರಕ್ಕೆ ಆಡಚಣೆ ಉಂಟಾಗಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಪ್ರಾಣ ಕೈಯಲ್ಲಿ ಹಿಡಿದು ಸಂಚಾರಿಸಬೇಕಾದ ಪರಿಸ್ಥಿತಿ ಇದೆ.
ಹೆದ್ದಾರಿ ಕಾಮಗಾರಿ ಎಷ್ಟು ಅವೈಜ್ಞಾನಿಕವಾಗಿದೆ ಎಂಬುವುದು ಇದರಿಂದ ಸಾಬೀತಾಗಿದೆ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವ ಕಾರಣ ಈ ಸಮಸ್ಯೆ ಎದುರಾಗಿದ್ದು ಮೊದಲ ಮಳೆಗೆ ಈ ರೀತಿಯ ಪರಿಸ್ಥಿತಿ ನೋಡಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.




