ಕಾಪು: ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್ಡಿಪಿಐ ಪ್ರತಿಭಟನೆ

ಕಾಪು: ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಎಸ್ಡಿಪಿಐ ಕಾಪು ಕ್ಷೇತ್ರ ಸಮಿತಿಯ ವತಿಯಿಂದ ಕಾಪು ಪೇಟೆಯಲ್ಲಿ ಶನಿವಾರ ಸಂಜೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಸಭೆಯಲ್ಲಿ ಎಸ್.ಡಿ.ಪಿ.ಐ. ಉಡುಪಿ ಜಿಲ್ಲಾಧ್ಯಕ್ಷರಾದ ಶಾಹಿದ್ ಆಲಿ ಪ್ರಸ್ತಾವಿಕ ಮಾತಾನಾಡಿ ಮುಸ್ಲಿಂ ಸಮುದಾಯವನ್ನು ಧಾರ್ಮಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಕಡೆಗಣಿಸಿರುವ ಕೇಂದ್ರ ಸರ್ಕಾರ ಹಂತ ಹಂತವಾಗಿ ಇಂತಹ ಕಾನೂನು ಕಟ್ಟಳೆಗಳ ಮೂಲಕ ಕೆಳವರ್ಗದ ಮತ್ತು ಅಲ್ಪಸಂಖ್ಯಾತ ವರ್ಗದ ಜನರನ್ನು ಹತ್ತಿಕ್ಕಲು ಮುಂದಾಗಿದೆ” ಎಂದು ಆರೋಪಿಸಿದರು.

ಪ್ರತಿಭಟನಾಕರನ್ನು ಉದ್ದೇಶಿ ಮಾತಾನಾಡಿದ ಎಸ್.ಡಿ.ಪಿ.ಐ. ಕಾಪು ಕ್ಷೇತ್ರ ಸಮಿತಿ ಉಪಾಧ್ಯಕ್ಷ ಹನೀಫ್ ಮೂಳೂರು ವಕ್ಫ್ ಇದು ಅಲ್ಲಾಹನ ಆಸ್ತಿ ಅಲ್ಲಾಹನ ಆಸ್ತಿಯಾಗಿ ಉಳಿಯಲಿದೆ. ವಕ್ಫ್ ಆಸ್ತಿ ಕಬಳಿಸುವ ನಡೆ ಮುಸ್ಲಿಂ ದ್ವೇಷದ ಮುಂದುವರಿದ ಭಾಗವಾಗಿದೆ. ನಾವು ಭಾರತೀಯರು ನಿಮ್ಮ ದ್ವೇಷದ ರಾಜಕೀಯಕ್ಕೆ ಮೂರ್ಖರಾಗದೆ, ನಿಮ್ಮನ್ನು ಬುಡ ಸಮೇತ ಕಿತ್ತು ಹಾಕುವುದೇ ನಮ್ಮ ಧ್ಯೇಯ ಎಂದು ಹೇಳಿದರು.

ಪ್ರತಿಭಟನಾ ಸಭೆಯನ್ನು ಉದ್ದೇಶಿ ಮಾತಾನಾಡಿದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮಾತನಾಡಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರೈತರು, ಅಲ್ಪಸಂಖ್ಯಾತರನ್ನು ಹತ್ತಿಕ್ಕಲು ಪ್ರಯತ್ನ ಸಾಗಿಸುತ್ತಲೇ ಇದೆ. ಇದೀಗ ಮುಸ್ಲಿಮರನ್ನು ಅಭಿವೃದ್ಧಿಪಡಿಸುವ ನೆಪವೊಡ್ಡಿ ವಕ್ಫ್ ಆಸ್ತಿಯ ಮೇಲೆ ಕಣ್ಣಿಟ್ಟಿದೆ. ಇದು ಸಂಘಪರಿವಾರದ ಹಿಡೆನ್ ಅಜೆಂಡಾ ಆಗಿದೆ. ಮುಸ್ಲಿಮರ ಸಬಲೀಕರಣಕ್ಕೆ ಮೀಸಲಿಟ್ಟಿರುವ ವಕ್ಫ್ ಸೊತ್ತನ್ನು ಕಬಳಿಸಲು ಯಾವುದೇ ಕಾರಣಕ್ಕೂ ನಾವು ಅವಕಾಶ ನೀಡುವುದಿಲ್ಲ. ವಕ್ಫ್ ಆಸ್ತಿಯ ಉಳಿವಿಗಾಗಿ ಎಲ್ಲಾ ರೀತಿಯ ತ್ಯಾಗಕ್ಕೂ ಸಿದ್ಧರಿದ್ದೇವೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ, “ವಖ್ಫ್ ಆಸ್ತಿಗೆ ಕೈ ಹಾಕದಿರಿ,ಬೆಂಕಿಯಲ್ಲಿ ಕೈ ಸುಟ್ಟು ಕೊಳ್ಳುವಿರಿ” ಎನ್ನುವ ಘೋಷಣೆಗಳನ್ನು ಕೂಗುವ ಮೂಲಕ ವಕ್ಫ್ ಬೋರ್ಡ್ ಮಸೂದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ನವಾಝ್ ಉಚ್ಚಿಲ ಕಾರ್ಯಕ್ರಮ ನಿರೂಪಿಸಿದರು. ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ. ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಸಾಧಿಕ್ ಕೆ.ಪಿ, ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಕಂಚಿನಡ್ಕ್, ಜಿಲ್ಲಾ ಸಮಿತಿ ಸದಸ್ಯರಾದ ಇಬ್ರಾಹಿಂ ಆರ್ಶ್, ರಝಾಕ್ ವೈ.ಎಸ್. ಮತ್ತಿತರರು ಉಪಸ್ಥಿತರಿದ್ದರು.

Latest Indian news

Popular Stories