
Udupi
ಕಾರ್ಕಳ: ಟಿಪ್ಪರ್ ಮತ್ತು ಬೈಕ್ ನಡುವೆ ಅಪಘಾತ | ಸವಾರ ಮೃತ್ಯು
ಕಾರ್ಕಳ: ಟಿಪ್ಪರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ.
ಮೃತರನ್ನು ನಿಝಾಮ್ ಅಹ್ಮದ್ ಎಂದು ಗುರುತಿಸಲಾಗಿದೆ. ಟಿಪ್ಪರ್-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರು.
ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




