ಕಟಪಾಡಿ : ಡಿವೈಡರ್ ಏರಿ ಬಂದ ಕಾರು ಬೈಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವರದಿಯಾಗಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರಿಬ್ಬರನ್ನು ಸಮಾಜ ಸೇವಕ ಆಸ್ಟಿನ್ ಕೋಟ್ಯಾನ್ ಸ್ಥಳೀಯ ರಿಕ್ಷಾದ ಮೂಲಕ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆಗೆ ದಾಖಲಿಸಿದ್ದಾರೆಂದು ತಿಳಿದು ಬಂದಿದೆ.
ಕಾಪುವಿನ ಕಟಪಾಡಿ ಹೊರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.