ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎನ್.ಎಮ್.ಡಿ.ಎಫ್.ಸಿ ಮಾದರಿಯಲ್ಲಿ ವಿದೇಶದಲ್ಲಿ ವ್ಯಾಸಂಗ ಮಾಡಲು ಬಯಸುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಮತ್ತು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿದ್ಯಾಲಯದಿಂದ ಭಾರತ ದೇಶದ ಪ್ರತಿಷ್ಟಿತ ಐ.ಐ.ಟಿ.ಎಸ್, ಐ.ಐ.ಎಮ್.ಎಸ್ ಹಾಗೂ ಐ.ಎಸ್.ಸಿ ಸಂಸ್ಥೆಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಮಾಡಬಯಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ವಿದೇಶಿ ವಿದ್ಯಾಭ್ಯಾಸ sಸಾಲ ಯೋಜನೆಯ ಸೌಲಭ್ಯ ಪಡೆಯಲು ನಿಗಮದ ವೆಬ್‌ಸೈಟ್ kmdconline.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಅಜಾದ್ ಭವನ, 1ನೇ ಮಹಡಿ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ಉಡುಪಿ, ದೂರವಾಣಿ ಸಂಖ್ಯೆ:0820-2574990, ಸಹಾಯವಾಣಿ ಸಂಖ್ಯೆ 8277799990 ಮತ್ತು ಉಡುಪಿ ದೂರವಾಣಿ ಸಂಖ್ಯೆ: 0820-2574596, ಕಾರ್ಕಳ ದೂರವಾಣಿ ಸಂಖ್ಯೆ: 08258-231101 ಹಾಗೂ ಕುಂದಾಪುರ ದೂರವಾಣಿ ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories