ಕೊಲ್ಲೂರು: ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತ್ಯು

ಕೊಲ್ಲೂರು, ಜೂ.29: ಮನೆಯ ಬಾವಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾಲ ಪಂಚಾಯತ್ ವ್ಯಾಪ್ತಿಯ ನಂದ್ರೋಳ್ಳಿ ಎಂಬಲ್ಲಿ ಶನಿವಾರ ನಡೆದಿದೆ.

ಮೃತರನ್ನು ನಂದ್ರೋಳ್ಳಿ ನಿವಾಸಿ ಶೀಲಾ ಹಾಗೂ ಸತೀಶ್ ಮಡಿವಾಳ ಎಂಬವರ ಮಗ ಧನರಾಜ್(13) ಹಾಗೂ ಮಗಳು ಛಾಯ(7) ಎಂದು ಗುರುತಿಸಲಾಗಿದೆ. ಇದೇ ವೇಳೆ ನೀರಿಗೆ ಬಿದ್ದ ತಾಯಿ ಶೀಲಾ(34) ಗಂಭೀರ ವಾಗಿ ಅಸ್ವಸ್ಥಗೊಂಡು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕೊಲ್ಲೂರು ಪೊಲೀಸರು ಆಗಮಿಸಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ

Latest Indian news

Popular Stories