ಮಂಗಳೂರು : ಸಂತ ಆಗ್ನೇಸ್ ಕಾಲೇಜಿನಲ್ಲಿ ಕೊಂಕಣಿ ಅಗಸ್ಟ್ 18 ರಂದು ‘ಕೊಂಕಣಿ ಮಾನ್ಯತಾ ದಿನ’ ಆಚರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ರಾಕ್ಣೊಂ ಕೊಂಕಣಿ ಪತ್ರದ ಸಂಪಾದಕರಾದ ವಂ. ಫಾ. ರೂಪೇಶ್ ಮಾಡ್ತಾ,
ಕೊಂಕಣಿ ಭಾಷೆಯನ್ನು ಪ್ರೀತಿಸಿ ಮನೆ ಮನಗಳಲ್ಲಿ ಮಾತನಾಡಲು ಕರೆ ನೀಡಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಥಿಯಾಗಿ ಆಗಮಿಸಿದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ರೋಯ್ ಕ್ಯಾಸ್ತಲಿನೋ ಕೊಂಕಣಿ ಭಾಷೆ ವಿವಿಧ ಹಂತಗಳಲ್ಲಿ ನಡೆದು ಬಂದ ರೀತಿಯನ್ನು ವಿವರಿಸಿ, ಮಾತೃ ಭಾಷೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಕೊಂಕಣಿ ಸಂಘದ “ಅಂಕರ್” ವಾರ್ಷಿಕ ಅಂಕೆಯನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಭಗಿನಿ ಡಾ. ವೆನಿಸ್ಸಾ ಎ.ಸಿ ಮಾತನಾಡಿ, ಕೊಂಕಣಿ ಸಂಘದಿಂದ ಆಯೋಜಿಸಿದ ವಿವಿದ ಕಾರ್ಯಗಳಿಗೆ ಅಭಿನಂದಿಸಿದರು ಹಾಗೂ ಕೊಂಕಣಿ ಭಾಷೆಯ ಮೇಲೆ ಇಟ್ಟ ಆಭಿಮಾನಕ್ಕೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಕೊಂಕಣಿ ಸಂಸ್ಕೃತಿಯ ಗುಮ್ಟಾಂ ಗಾಯನ ಕೊಂಕಣಿ ಸಂಘದ ಸದಸ್ಯರಿಂದ ನಡೆಯಿತು. ಸಂಯೋಜಕರಾದ ಎಲ್ಸನ್ ಹಿರ್ಗಾನ ಸ್ವಾಗತಿಸಿ, ಕಾರ್ಯದರ್ಶಿ ಗ್ಲೆನಿಟಾ ಡೇಸಾ ವಂದಿಸಿದರು, ಭಗಿನಿ ವೆಲೆಂಟಿನಾ ಕಾರ್ಯಕ್ರಮ ನಿರೂಪಿಸಿದರು.