ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ:ನಾಮಪತ್ರ ಸಲ್ಲಿಸಿದ ಕೋಟ ಶ್ರೀನಿವಾಸ ಪೂಜಾರಿ

ಉಡಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಇಂದು ನಾಮಪತ್ರ ಸಲ್ಲಿಸಿದರು.

ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ, ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಭೋಜೆ ಗೌಡ ಹಾಜರಿದ್ದರು.

Latest Indian news

Popular Stories