ಉಡುಪಿ: ಬೆಳ್ಕಲ್, ಗುಂಡಿನಹೊಳೆ ಹಾಗೂ ಮುದೂರು ಪರಿಸರದಲ್ಲಿ ನಕ್ಸಲರು ಕಾಣಿಸಿಕೊಂಡಿರುವ ಕುರಿತು ಕೆಲವು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು.
ಈ ಬಗ್ಗೆ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ಸ್ಪಷ್ಟನೆ ನೀಡಿದ್ದು, “ಕೆಲವು ಸ್ಥಳೀಯ ಮಾಧ್ಯಮಗಳು ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ವರದಿ ಮಾಡಿದೆ. ನಾವು ಅದನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಮಾಹಿತಿಯು ನಿಜವಾಗಿದ್ದರೆ ತಿಳಿಸುತ್ತೇವೆ. ANF ಜೊತೆಗೆ ಎಲ್ಲಾ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ.