Udupi

ಕುಂದಾಪುರ: 39 ವರ್ಷದ ಹಿಂದೆ ಕಳ್ಳತನ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕುಂದಾಪುರ: ಕಳೆದ 39 ವರ್ಷಗಳ ಹಿಂದೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಗುಜ್ಜಾಡಿ ಮೂಲದ ಪ್ರಕಾಶ್ (62) ಬಂಧಿತ ಆರೋಪಿ. ಈತನನ್ನು 39 ವರ್ಷಗಳ ಬಳಿಕ ಮುಂಬೈನ ಅಂಧೇರಿ ಈಸ್ಟ್‌ ಪರಿಸರದ ಸಾಕಿನಾಕ ಎಂಬಲ್ಲಿ ಬಂಧಿಸಿದ ಕುಂದಾಪುರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನಾಲ್ಕು ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿದ ವಿಚಾರವಾಗಿ ಪ್ರಕಾಶ್ ಎನ್ನುವರ ಮೇಲೆ ಕುಂದಾಪುರ ಠಾಣೆಯಲ್ಲಿ 1984 ರಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಈವರೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಸುಮಾರು 39 ವರ್ಷಗಳ ಹಳೆಯ ಪ್ರಕರಣ ಪತ್ತೆ ಕಾರ್ಯಚರಣೆಯನ್ನು ಕುಂದಾಪುರ ಪೊಲೀಸ್ ಠಾಣೆ ನಿರೀಕ್ಷಕ ನಂದಕುಮಾರ್‌ ಯು.ಬಿ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪಿಎಸ್ಐ ವಿನಯ ಎಂ.ಕೊರ್ಲಹಳ್ಳಿ ನೇತೃತ್ವದಲ್ಲಿ ಠಾಣಾ ಕ್ರೈಂ ಸಿಬ್ಬಂದಿಗಳಾದ ಶ್ರೀಧರ್, ರಾಮ ಪೂಜಾರಿ ಮತ್ತು ಹೆಡ್ ಕಾನ್ಸ್‌ಟೇಬಲ್ ಸಂತೋಷ್, ಗಂಗೊಳ್ಳಿ ಠಾಣಾ ಕ್ರೈಂ ಸಿಬ್ಬಂದಿ ಹೆಡ್ ಕಾನ್ಸ್‌ಟೇಬಲ್ ಚಂದ್ರಶೇಖರ್ ನಡೆಸಿದ್ದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button