ಬೈಂದೂರಿನ ಬಿಜೆಪಿಯ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಇಂದು ಕಾಂಗ್ರೆಸ್ ಸೇರ್ಪಡೆ

ಬೈಂದೂರು: ಬಿಜೆಪಿಯ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರು ಬಿಜೆಪಿಯಿಂದ ಟಿಕೆಟ್ ವಂಚಿತರಾಗಿ ಅಸಮಾಧಾನಗೊಂಡಿದ್ದರು. ಈಗಾಗಲೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಇಂದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.

ಪ್ರಮುಖ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಮಂಗಳವಾರ ಕಾಂಗ್ರೆಸ್ ಸೇರ್ಪಡೆಯಾಗಲಿದ್ದು, ಪಕ್ಷದ ಮುಂದೆ ಯಾವುದೇ ಬೇಡಿಕೆಯಿಟ್ಟಿಲ್ಲ ಎಂದು ಬಿ.ಎಂ.ಸುಕುಮಾರ ಶೆಟ್ಟಿ, ಬೈಂದೂರು ಹೇಳಿದ್ದಾರೆ.

Latest Indian news

Popular Stories