ಕುಂದಾಪುರ: ಸಿಡಿಲು ಬಡಿದು ವ್ಯಕ್ತಿ ಮೃತ್ಯು

ಕುಂದಾಪುರ, ಮೇ 14: ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಸಿದ್ದಾಪುರ ಗ್ರಾಮದ ಸುರೇಶ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಇಂದು ಸಂಜೆಯ ವೇಳೆ ಜಿಲ್ಲೆಯಾದ್ಯಂತ ಮಳೆಯಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಧಾರಕಾರ ಮಳೆಯಾಗಿರುವ ವರದಿಯಾಗಿದೆ. ಈ ಸಂದರ್ಭ ಸಿಡಿಲು ಬಡಿದ ಪರಿಣಾಮ ಸುರೇಶ ಶೆಟ್ಟಿ ಗಂಭೀರವಾಗಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

Latest Indian news

Popular Stories