ಕುಂದಾಪುರ: ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಂತ್ ಎಂಬುವರನ್ನು ಉಡುಪಿ ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ.
ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಒಟ್ಟು ನಾಲ್ಕು ಕಂತಿನಲ್ಲಿ 1.20ಲಕ್ಷ ರೂ. ಹಣ ಬಿಡುಗಡೆಯಾಗಿದ್ದು, ಈ ಹಣದಲ್ಲಿ ಅರ್ಧಂಶ ಹಣ ಮಂಜೂರು ಮಾಡಿಸಲು ಪಿಡಿಓ 10ಸಾವಿರ ರೂ. ಖರ್ಚಾಗಿದ್ದು, ಆ ಹಣವನ್ನು ವಾಸಾಸ್ಸು ನೀಡುವಂತೆ ಲಂಚ ಬೇಡಿಕೆಯನ್ನು ಪಿಡಿಓ ಇಟ್ಟಿದ್ದರು.
ಈ ಬಗ್ಗೆ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದು, ಅದರಂತೆ ಕಾರ್ಯಾ ಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ತೆಕ್ಕಟ್ಟೆ ಜಂಕ್ಷನ್‌ನಲ್ಲಿ ದೂರುದಾರರಿಂದ 10ಸಾವಿರ ಲಂಚ ಸ್ವೀಕರಿಸುತ್ತಿದ್ದ ಪಿಡಿಓ ಜಯಂತ್‌ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ.ಸೈಮನ್ ಮಾರ್ಗ ದರ್ಶನದಲ್ಲಿ ಉಡುಪಿ ಡಿವೈಎಸ್ಪಿ ಕೆ.ಸಿ.ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಎಂ. ಹಾಗೂ ಸಿಬ್ಬಂದಿ ನಾಗೇಶ್ ಉಡುಪ, ರಾಘವೇಂದ್ರ, ನಾಗರಾಜ್, ರೋಹಿತ್, ಮಲ್ಲಿಕಾ, ಸತೀಶ್ ಹಂದಾಡಿ, ಅಬ್ದುಲ್ ಜಲಾಲ್, ಪ್ರಸನ್ನ ದೇವಾಡಿಗ, ರಾಘವೇಂದ್ರ ಹೊಸ್ಕೋಟೆ, ಸತೀಶ್ ಆಚಾರ್ಯ, ಸೂರಜ್ ಈ ಕಾರ್ಯಾಚರಣೆ ನಡೆಸಿದ್ದಾರೆ.