ಉಡುಪಿ: ವಾರಾಹಿ ಯೋಜನೆಯ ಮಾನಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದ ಜಲಾಶಯದ ನೀರಿನ ಮಟ್ಟವು ಏಕ ಪ್ರಕಾರವಾಗಿ ಏರುತ್ತಿದೆ.
ಮಾನಿ ಜಲಾಶಯದ ಗರಿಷ್ಟ ಮಟ್ಟವು 594.36 ಮೀಟರ್ ಆಗಿದೆ. ಆ.5ರಂದು ಬೆಳಗ್ಗೆ 8ಗಂಟೆಗೆ ಜಲಾಶಯದ ಮಟ್ಟವು 588.15(ಶೇ.65.17) ಮೀಟರ್‌ಗಳಾಗಿರುತ್ತದೆ. ಈ ದಿನದ ಮಾನಿ ಜಲಾಶಯದ ಒಳಹರಿವು ಸುಮಾರು 3393 ಕ್ಯುಸೆಕ್ಸ್ ಆಗಿದೆ. ಇದೇ ರೀತಿ ಜಲಾಶಯಕ್ಕೆ ಒಳಹರಿವು ಮುಂದುವರೆದಲ್ಲಿ ಜಲಾಶಯವು ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುತ್ತದೆೆ. ಮಾನಿ ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚಾದ ನೀರನ್ನು ಹೊರಬಿಡಲಾಗುವುದು.
ಆದುದರಿಂದ ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವಾರಾಹಿ/ಹಾಲಾಡಿ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವ ಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿ ಕೊಳ್ಳಬೇಕೆಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಅಭಿಯಂತರು ಸೂಚನೆ ನೀಡಿದ್ದಾರೆ