ಉಡುಪಿ: ನಾವುಂದದ ಬಾಡಿಗೆ ಮನೆ ಖಾಲಿ ಮಾಡಿಕೊಂಡು ಹೋದ ಮಹಿಳೆ ನಾಪತ್ತೆ

ಉಡುಪಿ: ನಾವುಂದ ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪದ್ಮಾವತಿ (37) ಎಂಬ ಮಹಿಳೆಯು ಮೇ 25 ರಂದು ಬಾಡಿಗೆ ಮನೆ ಖಾಲಿ ಮಾಡಿಕೊಂಡು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಕಪ್ಪು ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ದೂ.ಸಂಖ್ಯೆ: 08254-251033, ಮೊ.ನಂ:9480805459 ಅಥವಾ ಬೈಂದೂರು ವೃತ್ತ ನಿರೀಕ್ಷಕರು ದೂ.ಸಂಖ್ಯೆ: 08254-251031, ಮೊ.ನಂ: 9480805434 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Latest Indian news

Popular Stories