
Udupi
ನೇಜಾರು ಕೊಲೆ ಪ್ರಕರಣ: ಸಚಿವೆ ಹೆಬ್ಬಾಳ್ಕರ್ ಮೌನಕ್ಕೆ ಅಸಮಾಧಾನ
ಉಡುಪಿ, ನ.13: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ ನೇಜಾರು ತಾಯಿ ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈವರೆಗೆ ಯಾವುದೇ ರೀತಿಯ ಖಂಡನೆ ವ್ಯಕ್ತಪಡಿಸಿ ಹೇಳಿಕೆ ನೀಡದಿರುವುದು ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿದೆ.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಸೇರಿದಂತೆ ಹಲವು ಗಣ್ಯರು ಸ್ಥಳಕ್ಕೆ ಆಗಮಿಸಿ ಘಟನೆಯನ್ನು ಖಂಡಿಸಿ ಆರೋಪಿಗಳನ್ನು ಶೀಘ್ರವೇ ಪತ್ತೆ ಹಚ್ಚುವಂತೆ ಹೇಳಿಕೆ ನೀಡಿದ್ದರು. ಆದರೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಗೆ ಭೇಟಿ ನೀಡುವುದು ಬಿಡಿ ಒಂದು ಹೇಳಿಕೆ ಕೂಡ ನೀಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ



