ಲೀಲಾಧರ್ ಶೆಟ್ಟಿ ದಂಪತಿ ಆತ್ಮಹತ್ಯೆ ಪ್ರಕರಣ | ನಾಪತ್ತೆಯಾಗಿದ್ದ ಸಾಕು ಮಗಳು ಪತ್ತೆ – ನಾಲ್ವರ ಬಂಧನ

ಉಡುಪಿ: ಸಮಾಜ ಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

compressed 703 2023 12 18 08 41 08 Udupi

ಬಂಧಿತರನ್ನುಆಕೆಯ ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ನಾಪತ್ತೆಯಾಗಲು ಸಹಕರಿಸಿದವರಾದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ.

ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಡಿಸೆಂಬರ್ 11 ರಂದು ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣದಾಖಲಾಗಿತ್ತು. ಸಾಕು ಮಗಳು ನಾಪತ್ತೆಯಾಗಿರುವುದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿ ರವರು ಸಮಾಜಕ್ಕೆ ಹೆದರಿಕೊಂಡು, ಮರ್ಯಾದೆಗೆ ಅಂಜಿ ಮನನೊಂದು ಮನೆಯ ಮಲಗುವ ಕೋಣೆಯಲ್ಲಿನ ಕಬ್ಬಿಣದ ಪಕ್ಕಾಸಿಗೆ ನೈಲಾನ್ ಸೀರೆಯನ್ನು ಕಟ್ಟಿ ಕುತ್ತಿಗೆಗೆ ನೇಣು ಬೀಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ನಾಪತ್ತೆ ಪ್ರಕರಣವನ್ನು ಭೇದಿಸಲು ಪೋಲಿಸರು ತಂಡಗಳನ್ನು ರಚಿಸಿದ್ದು ಅದರಂತೆ ಸಾಕು ಮಗಳನ್ನು ಪತ್ತೆಹಚ್ಚುವುದರೊಂದಿಗೆ. ಹಾಗೂ ಆಕೆಯ ಗೆಳೆಯ ಗೀರೀಶ್ ಮತ್ತು ಆತನ ಇತರ ಮೂವರ ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಗಿರೀಶ್ ವಿರುದ್ದ ಪೋಕ್ಸೊ, ಅತ್ಯಾಚಾರ ಹಾಗೂ ಕಿಡ್ನ್ಯಾಪ್ ಪ್ರಕರಣಗಳನ್ನು ಹಾಗೂ ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು ಕಾಪು ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಟಿ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಇವರ ಮಾರ್ಗದರ್ಶನದಲ್ಲಿ ಕಾಪು ಸಿಪಿಐ ಜಯಶ್ರೀ ಮಾನೆ ನೇತೃತ್ವದಲ್ಲಿ ಕಾಪು ಪಿಎಸ್ಐ ಅಬ್ದುಲ್ ಖಾದರ್ ಮತ್ತವರ ತಂಡ ಆರೋಪಿಗಳನ್ನು ಬಂಧಿಸಿದೆ.

Latest Indian news

Popular Stories