ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದರು.
ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾಜ್೯, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ ಅಂಶುಮತ್, ಮೊಟ್ಟಮ್ಮ ಹಾಜರಿದ್ದರು.